Skip to main content

ಬಂಡಾಜೆಯ ಹಾದಿ


               ===== ಬಂಡಾಜೆಯ ಹಾದಿ =====
ಮುಂಡಾಜೆ ಹಾಸ್ಟೆಲ್ನಲ್ಲಿ ಇರುವಾಗಲೇ ನನಿಗೆ ಬಂಡಾಜೆಗೊಮ್ಮೆ ಹೋಗ್ಬೇಕು ಎಂಬ ಆಸೆ ಮೂಡಿತ್ತು.(ಎಂಟು ವರ್ಷದ ಹಿಂದೆ)ಯಾಕೆಂದರೆ ಬೆಳ್ಳಿಯ ಹೊಳಪಿನಿಂದ ವಯ್ಯಾರದಿಂದ ಮೇಲಿಂದ ಜಿಗಿಯುವುದು ನಮ್ಮ ಹಾಸ್ಟೆಲ್ಗೆ ಕಾಣುವಷ್ಟು ಅಂದವಾಗಿ ಬೇರೆಲ್ಲಿಯೂ ಕಾಣಿಸೋದಿಲ್ಲ ಅನಿಸುತ್ತೆ.
ಮೊನ್ನೆ ಎಕ್ಸಾಮ್ ಮುಗಿದ ಮೇಲೆ ಎಲ್ಲಿಗಾದರು ಹೋಗಬೇಕು ಎಂದು ಅನಿಸಿದಾಗಲೇ ಬಂಡಾಜೆಗೆ ಹೋಗೋಣವೆನಿಸಿತು. ಒಂದೈದು ಜನಕ್ಕೆ ಕರೆಮಾಡಿ ಕೊನೆಗೆ ಹಮೀದ್, ರಕ್ಷಿತ್ ಸಿಕ್ಕರು.
ಎರಡು ಬೈಕಿನಲ್ಲಿ ಬೆಳಗ್ಗೆ 8 ಗಂಟೆಗೆನೆ ಬ್ಯಾಗ್'ಗೆ ನೀರು, ಬಿಸ್ಕೆಟ್ ಪ್ಯಾಕೇಟ್ಗಳನ್ನು ತುಂಬಿಕೊಂಡು, ನಾವು ಮೂವರು ಬಂಡಾಜೆಯ ತಣ್ಣನೆಯ ನೀರನ್ನು ಸ್ಪರ್ಶಿಸಲು ಹಾತೊರೆಯುತ್ತ ಹೊರಟೆವು.
ಪಶ್ಚಿಮ ಘಟ್ಟದ ಬುಡಕ್ಕೆ ಹೋಗಿ ಬಂಡಾಜೆಯ ತುತ್ತಾ ತುದಿಗೆರಲು ಅರಣ್ಯ ಇಲಾಖೆಗೆ ಸಂಬಂಧಿಸಿದವರ ಅನುಮತಿಯನ್ನು ಪಡೆದುಕೊಂಡು ಪ್ರಶಾಂತವಾಗಿದ್ದ ಕಾಡೊಳಗೆ ಹೆಜ್ಜೆ ಹಾಕಿದೆವು.
ದಾರಿ ತುಂಬಾ ತರೆಗೆಲೆ ಹರಡಿದ್ದರಿಂದ ಪ್ರತಿ ಹೆಜ್ಜೆ ಕೂಡ ಕಾಡಿನ ನಿಶಬ್ಧತೆಗೆ ಭಂಗ ತರುವಂತಿತ್ತು. ಆಗ ತಾನೇ ಮೇಲೇರುತ್ತಿದ್ದ ಸೂರ್ಯ ಕಾಡೊಳಗಿನ brightnessನ್ನು ಹೆಚ್ಚಿಸಲು ಮರಗಳ ಚಪ್ಪರದೊಂದಿಗೆ ಸೆಣಸುತ್ತ ಲಗ್ಗೆ ಇಡುತ್ತಿದ್ದ. ನಾವು ಮಾತ್ರ ಲೋಕದ ಚಿಂತೆಗಳೆಲ್ಲವನ್ನು ಬಿಟ್ಟು ಕಾಲಿಗೆ ಹಾಗೂ ಕಣ್ಣಿಗಷ್ಟೇ ಕೆಲಸ ಕೊಡುತ್ತ ಹೆಜ್ಜೆ ಹಾಕುತ್ತಿದ್ದೆವು. ದಾರಿಯುದ್ದಕ್ಕೂ ಹೊಟ್ಟೆ ತುಂಬಿಸಿಕೊಳ್ಳೋದಿಕ್ಕೆ ಮುಳ್ಳುಹಂದಿಯ ಶೋದ ಕಾರ್ಯಾಚರಣೆಯ ಕುರುಹುಗಳು, ಅಲ್ಲಲ್ಲಿ ಆನೆ ಲದ್ದಿ. ತರತರಹದ ಹಕ್ಕಿಗಳು, ಒಂದೆರಡು ಹಾವುಗಳು, ಹಾಗೇನೇ ಒಂದಷ್ಟು ಜಿಗಣೆಗಳಿಗೆ ರಕ್ತದಾನ ಮಾಡುತ್ತ ಮುಂದೆ ಸಾಗಿದೆವು. ಸುಮಾರು 8,9 ಕಿಲೋಮೀಟರ್ ಕಠಿಣ ದಾರಿಯಲ್ಲಿ ಹೆಜ್ಜೆ ಹಾಕಿದ್ದರಿಂದ ಹಮೀದ್'ರವರು ಸ್ವಲ್ಪ ಸುಸ್ತಾಗಿ ನಮಗಿಬ್ಬರಿಗೆ ರೋಧನೆ ಕೊಡಲು ಶುರುಮಾಡಿದರು. ಆದರೆ ಇವರ ಪರದಾಟ ಮಾತ್ರ  ನಮಿಗಿಬ್ಬರಿಗೆ ಮನರಂಜನೆ ನೀಡಿತು . ನಾವು ಹೋಗುವಾಗ ದಾರಿ ಸ್ವಲ್ಪ ಮಿಸ್ ಮಾಡಿಕೊಂಡಿದ್ದರಿಂದ ಬಂಡಾಜೆ ಜಲಪಾತದ ತುದಿಗೆ ಹೋಗದೆ ಸೀದಾ ಬುಡಕ್ಕೆ ಹೋದೆವು. ತುದಿಗೆ ಹೋಗಲು ನಾನು ರಕ್ಷಿತ್ ಪ್ರಯತ್ನ ಪಟ್ಟರು ಹಮೀದ್'ರವರು ಮಾತ್ರ ಅಷ್ಟೊಂದು ರಿಸ್ಕ್ ತಗೊಂಡು ನಾ ಬರೋದಿಲ್ಲ ಅಂತ ಹೇಳಿಬಿಟ್ಟರು.
ಜೊತೆಗೆ ನಮಗೂ ತುಂಬಾ ಆಯಾಸ ಆಗಿತ್ತು ಅಲ್ಲೇ  ಕುಳಿತುಕೊಂಡು ಮೇಲಿಂದ ಜಿಗಿಯುವ ನೀರನ್ನು ನೋಡುತ್ತಾ ಬಿಸ್ಕೆಟ್ ಪ್ಯಾಕೆಟ್'ನ್ನು ಮುಗಿಸಿ ಹೊರಟು ಬಂದೆವು. ಒಂದು ವಾರ ಬಿಟ್ಟು ಬಂಡಾಜೆಯ ತುದಿಗೆ ಹೋಗೋಣವೆಂದು ತೀರ್ಮಾನಿಸಿ. ಟ್ರೆಕ್ಕಿಂಗ್ ಅನುಮತಿ  ನೀಡುವ ಗೌಡ್ರಲ್ಲಿ ಒಂದು ವಾರ ಬಿಟ್ಟು ಬರ್ತೇವೆ ಅಂತ ಹೇಳಿ ಬಂದೆವು.

ಬಂಡಾಜೆ 3/12/2019
#Westernghat #bandajefalls
#trekking #Naveenvideo


Comments

Popular posts from this blog

ತಡಿಯಂಡಮೊಳ್ ಚಾರಣ ಭಾಗ -2, ನಾಲ್ನಾಡು ಅರಮನೆ.

ತಡಿಯಂಡಮೊಳ್ ಚಾರಣ ಭಾಗ -2, ನಾಲ್ನಾಡು ಅರಮನೆ.           ಅರಮನೆಯನ್ನು ನೋಡಿಕೊಳ್ಳುವವರು ನಮ್ಮನ್ನೋಡಿ ವೇಗವಾಗಿ ಧಾವಿಸಿ ನಗುಮೊಗದಿಂದಲೇ ಸ್ವಾಗತಿಸಿದರು. ಅಂದಾ ಹಾಗೆ, ಈ ನಾಲ್ನಾಡು ಅರಮನೆಯ ನಿರ್ಮಾಣದ ಕುರಿತು ಇತಿಹಾಸವನ್ನು ಹುಡುಕುತ್ತ ಹೋದರೆ, ದೊಡ್ಡವೀರ ರಾಜೇಂದ್ರರು ಶತ್ರುಗಳಿಂದ ತನ್ನ ಕುಟುಂಬವನ್ನು ಕಾಪಾಡಿಕೊಳ್ಳುವ ಸಲುವಾಗಿ ಸೂಕ್ತ ಸ್ಥಳವನ್ನು ಹುಡುಕುತ್ತ ಬಂದಾಗ ಅವರ ಕಣ್ಣಿಗೆ ಬಿದ್ದಿದ್ದು ಈ ಬೆಟ್ಟ ಶ್ರೇಣಿಗಳಿಂದ ಹಾಗೂ ದಟ್ಟವಾದ ಕಾನನದಿಂದ ಸುತ್ತುವರೆದ ಯುವಕಪಾಡಿ ಗ್ರಾಮದಲ್ಲಿರುವ ಈ ಪ್ರದೇಶ. ಈ ಸ್ಥಳದಲ್ಲಿ 1792ರಲ್ಲಿ ಎರಡು ಅಂತಸ್ತಿನ ಸಣ್ಣ ಅರಮನೆಯನ್ನು  ನಿರ್ಮಿಸಿದರು ಎಂದು ಇತಿಹಾಸ ಹೇಳುತ್ತೆ. ಅರಮನೆಯನ್ನು ನೋಡಿಕೊಳ್ಳುವವರು, ನಮ್ಮ ಊರಿನ ಬಗ್ಗೆ ಹಾಗೂ ನಮ್ಮ ಪರಿಚಯ ಮಾಡಿಕೊಳ್ಳುತ್ತಾ, ಅರಮನೆಯ ಬಗ್ಗೆ ಮಾಹಿತಿಯನ್ನು ನೀಡುತ್ತಾ ಅರಮನೆಯೊಳಗೆ ಹೆಜ್ಜೆ ಹಾಕಿದರು. ನಾವು ಅವರನ್ನು ಹಿಂಬಾಲಿಸುತ್ತಾ ಮುಖ್ಯ ದ್ವಾರವನ್ನು ದಾಟಿ ಅರಮನೆಯೊಳಗೆ ಹೋದಾಗ ಬಲ ಬದಿಯಲ್ಲಿ ಒಂದು ಮಂಟಪವಿದೆ. ಇವರು ಹೇಳುವ ಪ್ರಕಾರ ಇದು ದೊಡ್ಡವೀರ ರಾಜೇಂದ್ರರ ತಂಗಿಯ ವಿವಾಹ ಮಂಟಪವೆಂದು  ಹೇಳಿದರು. ಆದರೆ ನಾನು ಗೂಗಲ್ನಲ್ಲಿ ಜಾಲಾಡಿದಾಗ ದೊಡ್ಡವೀರ ರಾಜೇಂದ್ರರ ಮದುವೆ ಮಂಟಪವೆಂದು ತಿಳಿದು ಬರುತ್ತದೆ. ಈ ಮಂಟಪಕ್ಕೆ ನಾಲ್ಕು ಪ್ರವೇಶ ದ್ವಾರಗಳಿದ್ದು ಮೇಲ್ಬಾಗದಲ್ಲಿ ನಾಲ್ಕು ದಿಕ್ಕಿಗ...

ಬಿರ್ಲಾ ದೇವಸ್ಥಾನ ಕೋಲ್ಕತಾ.

  ಬೆಳಗ್ಗೆನೇ ನಿತ್ಯ ದಿನಚರಿಗಳನ್ನು ಮುಗಿಸಿ, ಕ್ಯಾಮೆರಾ ಬ್ಯಾಗ್ ಎತ್ತಿಕೊಂಡು ಕಂಟೋನ್ಮೆಂಟ್ ನಿಂದ ಹೊರಗೆ ಬಂದೆ. ಅಲ್ಲಿಂದ ಸೀದಾ ಬಂದವ ಪ್ರತಿ ರಜೆಯ ದಿನ ಚಾ ಕುಡಿವ ಸ್ಥಳಕ್ಕೆ ಬಂದು, ಒಂದು ಚಹಾದ ಜೊತೆಗೆ ಹೂಗ್ಲಿ ನದಿಯ ಹರಿವನ್ನು ನೋಡುತ್ತಾ  ಇವತ್ತು  ಎಲ್ಲಿಗೆ ಹೋಗೋದು ಎಂದು ಯೋಚಿಸುತ್ತಾ ಗೂಗಲ್ ಮಾಡಿದಾಗ ಮೊದಲೇ Note ಮಾಡಿಟ್ಟುಕೊಂಡಿದ್ದ ಬಿರ್ಲಾ ಮಂದಿರ ಕಾಣಿಸಿತು. ನಾನಿದ್ದ ಸ್ಥಳದಿಂದ ನಡೆದುಕೊಂಡು ಹೋಗಲು ಎಷ್ಟು ಕಿಮೀ ಇದೆ ಎಂದು ಹುಡುಕಿದಾಗ 8 ಕಿಮೀ ತೋರಿಸಿತು. ಅಲ್ಲಿಂದ ಸೀದಾ ವೇಗವಾಗಿ ಹೆಜ್ಜೆ ಯ ಮೇಲೊಂದು ಹೆಜ್ಜೆ  ಹಾಕುತ್ತಾ ಹೊರಟೆ. ಯಾಕಂದ್ರೆ 11ಕ್ಕೆ ದೇವಸ್ಥಾನ ಕ್ಲೋಸ್ ಆಗುತ್ತೆ ಎನ್ನುವ ಮಾಹಿತಿ ಕೂಡ ಗೂಗಲ್ ನಲ್ಲಿ ತೋರಿಸ್ತಾ ಇತ್ತು. ಇನ್ನು ನನ್ಯಾವತ್ತು ಸುತ್ತಾಡಲು ಪ್ರಾಥಮಿಕವಾಗಿ ಆಯ್ಕೆ ಮಾಡುವ ಸ್ಥಳ ಯಾವುದೆಂದರೆ, ನಮಗೆ ನಡೆದುಕೊಂಡು ಹೋಗಲು ಸಾಧ್ಯವಿರುವಂತಹ ಸ್ಥಳಗಳು, ಯಾಕಂದ್ರೆ ನಡೆದುಕೊಂಡು ಹೋಗುವಾಗ ನಮಗೆ ಬೇಕಾದ ಹಾಗೆ ಫೋಟೋವನ್ನು ಸೆರೆ ಹಿಡಿಯಬಹುದು ಹಾಗೂ ಏಕಾಂಗಿಯಾಗಿ ನಡೆದುಕೊಂಡು ಹೋಗುವ ಒಂದು ಮಜನೆ ಇದ್ಯಾಲ್ವ ಅದೊಂದು ನಶೆನೆ ಬೇರೆ ಮರ್ರೆ. ಅಂತೂ 10 ಗಂಟೆ ಆಗುವಷ್ಟರಲ್ಲಿ ಬಿರ್ಲಾ ಮಂದಿರಕ್ಕೆ ತಲುಪಿದೆ. ಮೊದಲನೆಯದಾಗಿ ಅಲ್ಲಿನ ಸಿಬ್ಬಂದಿ ನಗು ಮೊಗದೊಂದಿಗೆ ಸ್ವಾಗತಿಸಿದರೆ ಎರಡನೆಯದಾಗಿ ಇಲ್ಲಿ "ಯಾವುದೇ ಫೋಟೋ ಹಾಗೂ ವಿಡಿಯೋ ಸೆರೆ ಹಿಡಿಯಲು ಅವಕಾಶ ಇಲ್ಲ" ಎಂದರು. ಇನ್ನು...