ಬೆಳಗ್ಗೆನೇ ನಿತ್ಯ ದಿನಚರಿಗಳನ್ನು ಮುಗಿಸಿ, ಕ್ಯಾಮೆರಾ ಬ್ಯಾಗ್ ಎತ್ತಿಕೊಂಡು ಕಂಟೋನ್ಮೆಂಟ್ ನಿಂದ ಹೊರಗೆ ಬಂದೆ. ಅಲ್ಲಿಂದ ಸೀದಾ ಬಂದವ ಪ್ರತಿ ರಜೆಯ ದಿನ ಚಾ ಕುಡಿವ ಸ್ಥಳಕ್ಕೆ ಬಂದು, ಒಂದು ಚಹಾದ ಜೊತೆಗೆ ಹೂಗ್ಲಿ ನದಿಯ ಹರಿವನ್ನು ನೋಡುತ್ತಾ ಇವತ್ತು ಎಲ್ಲಿಗೆ ಹೋಗೋದು ಎಂದು ಯೋಚಿಸುತ್ತಾ ಗೂಗಲ್ ಮಾಡಿದಾಗ ಮೊದಲೇ Note ಮಾಡಿಟ್ಟುಕೊಂಡಿದ್ದ ಬಿರ್ಲಾ ಮಂದಿರ ಕಾಣಿಸಿತು. ನಾನಿದ್ದ ಸ್ಥಳದಿಂದ ನಡೆದುಕೊಂಡು ಹೋಗಲು ಎಷ್ಟು ಕಿಮೀ ಇದೆ ಎಂದು ಹುಡುಕಿದಾಗ 8 ಕಿಮೀ ತೋರಿಸಿತು. ಅಲ್ಲಿಂದ ಸೀದಾ ವೇಗವಾಗಿ ಹೆಜ್ಜೆ ಯ ಮೇಲೊಂದು ಹೆಜ್ಜೆ ಹಾಕುತ್ತಾ ಹೊರಟೆ. ಯಾಕಂದ್ರೆ 11ಕ್ಕೆ ದೇವಸ್ಥಾನ ಕ್ಲೋಸ್ ಆಗುತ್ತೆ ಎನ್ನುವ ಮಾಹಿತಿ ಕೂಡ ಗೂಗಲ್ ನಲ್ಲಿ ತೋರಿಸ್ತಾ ಇತ್ತು. ಇನ್ನು ನನ್ಯಾವತ್ತು ಸುತ್ತಾಡಲು ಪ್ರಾಥಮಿಕವಾಗಿ ಆಯ್ಕೆ ಮಾಡುವ ಸ್ಥಳ ಯಾವುದೆಂದರೆ, ನಮಗೆ ನಡೆದುಕೊಂಡು ಹೋಗಲು ಸಾಧ್ಯವಿರುವಂತಹ ಸ್ಥಳಗಳು, ಯಾಕಂದ್ರೆ ನಡೆದುಕೊಂಡು ಹೋಗುವಾಗ ನಮಗೆ ಬೇಕಾದ ಹಾಗೆ ಫೋಟೋವನ್ನು ಸೆರೆ ಹಿಡಿಯಬಹುದು ಹಾಗೂ ಏಕಾಂಗಿಯಾಗಿ ನಡೆದುಕೊಂಡು ಹೋಗುವ ಒಂದು ಮಜನೆ ಇದ್ಯಾಲ್ವ ಅದೊಂದು ನಶೆನೆ ಬೇರೆ ಮರ್ರೆ. ಅಂತೂ 10 ಗಂಟೆ ಆಗುವಷ್ಟರಲ್ಲಿ ಬಿರ್ಲಾ ಮಂದಿರಕ್ಕೆ ತಲುಪಿದೆ. ಮೊದಲನೆಯದಾಗಿ ಅಲ್ಲಿನ ಸಿಬ್ಬಂದಿ ನಗು ಮೊಗದೊಂದಿಗೆ ಸ್ವಾಗತಿಸಿದರೆ ಎರಡನೆಯದಾಗಿ ಇಲ್ಲಿ "ಯಾವುದೇ ಫೋಟೋ ಹಾಗೂ ವಿಡಿಯೋ ಸೆರೆ ಹಿಡಿಯಲು ಅವಕಾಶ ಇಲ್ಲ" ಎಂದರು. ಇನ್ನು...