Skip to main content

ಬಿರ್ಲಾ ದೇವಸ್ಥಾನ ಕೋಲ್ಕತಾ.

 ಬೆಳಗ್ಗೆನೇ ನಿತ್ಯ ದಿನಚರಿಗಳನ್ನು ಮುಗಿಸಿ, ಕ್ಯಾಮೆರಾ ಬ್ಯಾಗ್ ಎತ್ತಿಕೊಂಡು ಕಂಟೋನ್ಮೆಂಟ್ ನಿಂದ ಹೊರಗೆ ಬಂದೆ. ಅಲ್ಲಿಂದ ಸೀದಾ ಬಂದವ ಪ್ರತಿ ರಜೆಯ ದಿನ ಚಾ ಕುಡಿವ ಸ್ಥಳಕ್ಕೆ ಬಂದು, ಒಂದು ಚಹಾದ ಜೊತೆಗೆ ಹೂಗ್ಲಿ ನದಿಯ ಹರಿವನ್ನು ನೋಡುತ್ತಾ  ಇವತ್ತು  ಎಲ್ಲಿಗೆ ಹೋಗೋದು ಎಂದು ಯೋಚಿಸುತ್ತಾ ಗೂಗಲ್ ಮಾಡಿದಾಗ ಮೊದಲೇ Note ಮಾಡಿಟ್ಟುಕೊಂಡಿದ್ದ ಬಿರ್ಲಾ ಮಂದಿರ ಕಾಣಿಸಿತು.

ನಾನಿದ್ದ ಸ್ಥಳದಿಂದ ನಡೆದುಕೊಂಡು ಹೋಗಲು ಎಷ್ಟು ಕಿಮೀ ಇದೆ ಎಂದು ಹುಡುಕಿದಾಗ 8 ಕಿಮೀ ತೋರಿಸಿತು. ಅಲ್ಲಿಂದ ಸೀದಾ ವೇಗವಾಗಿ ಹೆಜ್ಜೆ ಯ ಮೇಲೊಂದು ಹೆಜ್ಜೆ  ಹಾಕುತ್ತಾ ಹೊರಟೆ. ಯಾಕಂದ್ರೆ 11ಕ್ಕೆ ದೇವಸ್ಥಾನ ಕ್ಲೋಸ್ ಆಗುತ್ತೆ ಎನ್ನುವ ಮಾಹಿತಿ ಕೂಡ ಗೂಗಲ್ ನಲ್ಲಿ ತೋರಿಸ್ತಾ ಇತ್ತು. ಇನ್ನು ನನ್ಯಾವತ್ತು ಸುತ್ತಾಡಲು ಪ್ರಾಥಮಿಕವಾಗಿ ಆಯ್ಕೆ ಮಾಡುವ ಸ್ಥಳ ಯಾವುದೆಂದರೆ, ನಮಗೆ ನಡೆದುಕೊಂಡು ಹೋಗಲು ಸಾಧ್ಯವಿರುವಂತಹ ಸ್ಥಳಗಳು, ಯಾಕಂದ್ರೆ ನಡೆದುಕೊಂಡು ಹೋಗುವಾಗ ನಮಗೆ ಬೇಕಾದ ಹಾಗೆ ಫೋಟೋವನ್ನು ಸೆರೆ ಹಿಡಿಯಬಹುದು ಹಾಗೂ ಏಕಾಂಗಿಯಾಗಿ ನಡೆದುಕೊಂಡು ಹೋಗುವ ಒಂದು ಮಜನೆ ಇದ್ಯಾಲ್ವ ಅದೊಂದು ನಶೆನೆ ಬೇರೆ ಮರ್ರೆ.

ಅಂತೂ 10 ಗಂಟೆ ಆಗುವಷ್ಟರಲ್ಲಿ ಬಿರ್ಲಾ ಮಂದಿರಕ್ಕೆ ತಲುಪಿದೆ. ಮೊದಲನೆಯದಾಗಿ ಅಲ್ಲಿನ ಸಿಬ್ಬಂದಿ ನಗು ಮೊಗದೊಂದಿಗೆ ಸ್ವಾಗತಿಸಿದರೆ ಎರಡನೆಯದಾಗಿ ಇಲ್ಲಿ "ಯಾವುದೇ ಫೋಟೋ ಹಾಗೂ ವಿಡಿಯೋ ಸೆರೆ ಹಿಡಿಯಲು ಅವಕಾಶ ಇಲ್ಲ" ಎಂದರು. ಇನ್ನು ಈ ದೇವಸ್ಥಾನದ ಬಗ್ಗೆ ಹೇಳಬೇಕೆಂದರೆ, ಈ ದೇವಸ್ಥಾನವನ್ನು ಬಿರ್ಲಾ ಕುಟುಂಬದವರು ಕಟ್ಟಿಸಿದ್ದು. 1970 ರಲ್ಲಿ ದೇವಸ್ಥಾನದ ಕೆಲಸ ಪ್ರಾರಂಭಿಸಿ ಸುದೀರ್ಘ 26 ವರ್ಷದ 1996 ರಲ್ಲಿ ಉದ್ಘಾಟಿಸಿದರು. ಕೋಲ್ಕತಾದಲ್ಲಿ ಒಂದೆರಡು ದೇವಸ್ಥಾನಗಳಿಗೆಲ್ಲ ಹೋಗಿದ್ದೇನೆ ಆದರೆ ಇಲ್ಲಿಯಷ್ಟು ವವ್ಯವಸ್ಥಿತವಾಗಿ ಇಲ್ಲಿನ ಯಾವ ದೇವಸ್ಥಾನಗಳಲ್ಲಿಯೂ ಕಂಡಿಲ್ಲ. ಈ ದೇವಸ್ಥಾನದ ವಾಸ್ತು ಶಿಲ್ಪ ಭುವನೇಶ್ವರ್ ರಲ್ಲಿರುವ ಲಿಂಗರಾಜ ದೇವಸ್ಥಾನ ಸ್ಫೂರ್ತಿ ಪಡೆದು ಕಟ್ಟಿಸಲಾಗಿದೆ ಎಂದು ಹೇಳಲಾಗುತ್ತೆ. 

ಈ ದೇವಸ್ಥಾನದಲ್ಲಿ ಪ್ರಮುಖವಾಗಿ ರಾಧೆಕೃಷ್ಣ, ಗಣಪತಿ, ಹನುಮ, ದುರ್ಗಾದೇವಿ ಹಾಗೂ ಶಿವನನ್ನು ಆರಾಧಿಸುತ್ತಾರೆ. ದೇವರಿಗೆ ಪ್ರಾರ್ಥನೆಯನ್ನು ಸಲ್ಲಿಸಿ ಹಾಗೂ ಪ್ರಸಾದವನ್ನು ಸ್ವೀಕರಿಸಿ ಕೃತಜ್ಞತ ಭಾವದೊಂದಿಗೆ ದೇವಸ್ಥಾನದಿಂದ ಹೊರಗೆಬಂದೆ. 

ಅಷ್ಟೋತ್ತಿಗಗಾಳೇ ಸಮಯ 11 ಆಗಿತ್ತು. ದೇವಸ್ಥಾನದಿಂದ ಹೊರಗೆ ಬಂದಾಗ ಮೊದಲು ಮನಸ್ಸಿನಲ್ಲಿ ಮೂಡಿದ್ದು  ಈ ಬಿರ್ಲಾ ಕುಟುಂಬದರಿಗೊಂದು ತುಂಬು ಹೃದಯದಿಂದ ಕೃತಜ್ಞತೆ. ಯಾಕಂದ್ರೆ ಅಷ್ಟೊಂದು ಚಂದ ಇದೆ ಮರ್ರೆ ಈ ದೇವಸ್ಥಾನ. ಹಾಗೂ ಇಂತಹ ದೇವಸ್ಥಾನಗಳು ಕೂಡ ಭಾರತಕ್ಕೆ ತುಂಬಾ ಅಗತ್ಯ ಕೂಡ ಇದೆ. ಇನ್ನೇನು ಹೊರಡಬೇಕು ಅನ್ನುವ ಅಷ್ಟರಲ್ಲಿ ದಡಬಡ ಸದ್ದು ಮಾಡುತ್ತ ಟ್ರಮ್ ಬಸ್ಸೊಂದು ಕಣ್ಣ ಮುಂದೆ ಹಾದು ಹೋಯಿತು. 

ಅದರ ಒಂದೆರಡು ಫೋಟೋಗಳನ್ನು ಸೆರೆ ಹಿಡಿಯುತ್ತ ಮತ್ತೆ ಬಂದ ದಾರಿಯ ಗೆರೆಯನ್ನು ಅಳಿಸುತ್ತ ಕಂಟೋನ್ಮೆಂಟ್ ಕಡೆಗೆ ಹೆಜ್ಜೆ ಹಾಕಿದೆ. ನಮ್ಮ ಕ್ಯಾಂಪಸ್ ಗೆ ತಲುಪುವಷ್ಟರಲ್ಲಿ 20 km ಕೂಡ ಪೂರ್ತಿಯಾಯಿತು.







Comments

Post a Comment

Popular posts from this blog

ಬಂಡಾಜೆಯ ಹಾದಿ

               ===== ಬಂಡಾಜೆಯ ಹಾದಿ ===== ಮುಂಡಾಜೆ ಹಾಸ್ಟೆಲ್ನಲ್ಲಿ ಇರುವಾಗಲೇ ನನಿಗೆ ಬಂಡಾಜೆಗೊಮ್ಮೆ ಹೋಗ್ಬೇಕು ಎಂಬ ಆಸೆ ಮೂಡಿತ್ತು.(ಎಂಟು ವರ್ಷದ ಹಿಂದೆ)ಯಾಕೆಂದರೆ ಬೆಳ್ಳಿಯ ಹೊಳಪಿನಿಂದ ವಯ್ಯಾರದಿಂದ ಮೇಲಿಂದ ಜಿಗಿಯುವುದು ನಮ್ಮ ಹಾಸ್ಟೆಲ್ಗೆ ಕಾಣುವಷ್ಟು ಅಂದವಾಗಿ ಬೇರೆಲ್ಲಿಯೂ ಕಾಣಿಸೋದಿಲ್ಲ ಅನಿಸುತ್ತೆ. ಮೊನ್ನೆ ಎಕ್ಸಾಮ್ ಮುಗಿದ ಮೇಲೆ ಎಲ್ಲಿಗಾದರು ಹೋಗಬೇಕು ಎಂದು ಅನಿಸಿದಾಗಲೇ ಬಂಡಾಜೆಗೆ ಹೋಗೋಣವೆನಿಸಿತು. ಒಂದೈದು ಜನಕ್ಕೆ ಕರೆಮಾಡಿ ಕೊನೆಗೆ ಹಮೀದ್, ರಕ್ಷಿತ್ ಸಿಕ್ಕರು. ಎರಡು ಬೈಕಿನಲ್ಲಿ ಬೆಳಗ್ಗೆ 8 ಗಂಟೆಗೆನೆ ಬ್ಯಾಗ್'ಗೆ ನೀರು, ಬಿಸ್ಕೆಟ್ ಪ್ಯಾಕೇಟ್ಗಳನ್ನು ತುಂಬಿಕೊಂಡು, ನಾವು ಮೂವರು ಬಂಡಾಜೆಯ ತಣ್ಣನೆಯ ನೀರನ್ನು ಸ್ಪರ್ಶಿಸಲು ಹಾತೊರೆಯುತ್ತ ಹೊರಟೆವು. ಪಶ್ಚಿಮ ಘಟ್ಟದ ಬುಡಕ್ಕೆ ಹೋಗಿ ಬಂಡಾಜೆಯ ತುತ್ತಾ ತುದಿಗೆರಲು ಅರಣ್ಯ ಇಲಾಖೆಗೆ ಸಂಬಂಧಿಸಿದವರ ಅನುಮತಿಯನ್ನು ಪಡೆದುಕೊಂಡು ಪ್ರಶಾಂತವಾಗಿದ್ದ ಕಾಡೊಳಗೆ ಹೆಜ್ಜೆ ಹಾಕಿದೆವು. ದಾರಿ ತುಂಬಾ ತರೆಗೆಲೆ ಹರಡಿದ್ದರಿಂದ ಪ್ರತಿ ಹೆಜ್ಜೆ ಕೂಡ ಕಾಡಿನ ನಿಶಬ್ಧತೆಗೆ ಭಂಗ ತರುವಂತಿತ್ತು. ಆಗ ತಾನೇ ಮೇಲೇರುತ್ತಿದ್ದ ಸೂರ್ಯ ಕಾಡೊಳಗಿನ brightnessನ್ನು ಹೆಚ್ಚಿಸಲು ಮರಗಳ ಚಪ್ಪರದೊಂದಿಗೆ ಸೆಣಸುತ್ತ ಲಗ್ಗೆ ಇಡುತ್ತಿದ್ದ. ನಾವು ಮಾತ್ರ ಲೋಕದ ಚಿಂತೆಗಳೆಲ್ಲವನ್ನು ಬಿಟ್ಟು ಕಾಲಿ...

ತಡಿಯಂಡಮೊಳ್ ಚಾರಣ ಭಾಗ -2, ನಾಲ್ನಾಡು ಅರಮನೆ.

ತಡಿಯಂಡಮೊಳ್ ಚಾರಣ ಭಾಗ -2, ನಾಲ್ನಾಡು ಅರಮನೆ.           ಅರಮನೆಯನ್ನು ನೋಡಿಕೊಳ್ಳುವವರು ನಮ್ಮನ್ನೋಡಿ ವೇಗವಾಗಿ ಧಾವಿಸಿ ನಗುಮೊಗದಿಂದಲೇ ಸ್ವಾಗತಿಸಿದರು. ಅಂದಾ ಹಾಗೆ, ಈ ನಾಲ್ನಾಡು ಅರಮನೆಯ ನಿರ್ಮಾಣದ ಕುರಿತು ಇತಿಹಾಸವನ್ನು ಹುಡುಕುತ್ತ ಹೋದರೆ, ದೊಡ್ಡವೀರ ರಾಜೇಂದ್ರರು ಶತ್ರುಗಳಿಂದ ತನ್ನ ಕುಟುಂಬವನ್ನು ಕಾಪಾಡಿಕೊಳ್ಳುವ ಸಲುವಾಗಿ ಸೂಕ್ತ ಸ್ಥಳವನ್ನು ಹುಡುಕುತ್ತ ಬಂದಾಗ ಅವರ ಕಣ್ಣಿಗೆ ಬಿದ್ದಿದ್ದು ಈ ಬೆಟ್ಟ ಶ್ರೇಣಿಗಳಿಂದ ಹಾಗೂ ದಟ್ಟವಾದ ಕಾನನದಿಂದ ಸುತ್ತುವರೆದ ಯುವಕಪಾಡಿ ಗ್ರಾಮದಲ್ಲಿರುವ ಈ ಪ್ರದೇಶ. ಈ ಸ್ಥಳದಲ್ಲಿ 1792ರಲ್ಲಿ ಎರಡು ಅಂತಸ್ತಿನ ಸಣ್ಣ ಅರಮನೆಯನ್ನು  ನಿರ್ಮಿಸಿದರು ಎಂದು ಇತಿಹಾಸ ಹೇಳುತ್ತೆ. ಅರಮನೆಯನ್ನು ನೋಡಿಕೊಳ್ಳುವವರು, ನಮ್ಮ ಊರಿನ ಬಗ್ಗೆ ಹಾಗೂ ನಮ್ಮ ಪರಿಚಯ ಮಾಡಿಕೊಳ್ಳುತ್ತಾ, ಅರಮನೆಯ ಬಗ್ಗೆ ಮಾಹಿತಿಯನ್ನು ನೀಡುತ್ತಾ ಅರಮನೆಯೊಳಗೆ ಹೆಜ್ಜೆ ಹಾಕಿದರು. ನಾವು ಅವರನ್ನು ಹಿಂಬಾಲಿಸುತ್ತಾ ಮುಖ್ಯ ದ್ವಾರವನ್ನು ದಾಟಿ ಅರಮನೆಯೊಳಗೆ ಹೋದಾಗ ಬಲ ಬದಿಯಲ್ಲಿ ಒಂದು ಮಂಟಪವಿದೆ. ಇವರು ಹೇಳುವ ಪ್ರಕಾರ ಇದು ದೊಡ್ಡವೀರ ರಾಜೇಂದ್ರರ ತಂಗಿಯ ವಿವಾಹ ಮಂಟಪವೆಂದು  ಹೇಳಿದರು. ಆದರೆ ನಾನು ಗೂಗಲ್ನಲ್ಲಿ ಜಾಲಾಡಿದಾಗ ದೊಡ್ಡವೀರ ರಾಜೇಂದ್ರರ ಮದುವೆ ಮಂಟಪವೆಂದು ತಿಳಿದು ಬರುತ್ತದೆ. ಈ ಮಂಟಪಕ್ಕೆ ನಾಲ್ಕು ಪ್ರವೇಶ ದ್ವಾರಗಳಿದ್ದು ಮೇಲ್ಬಾಗದಲ್ಲಿ ನಾಲ್ಕು ದಿಕ್ಕಿಗ...